ಕರುಣಾಳು ಬಾ ಬೆಳಕೆ ಮಸುಕಿದೀ ಮಬ್ಬಿನಲಿ
ಕೈ ಹಿಡಿದು ನಡೆಸೆನ್ನನು
ಇರುಳು ಕತ್ತಲೆಯ ಗವಿ ಮನೆ ದೂರ ಕನಿಕರಿಸಿ
ಕೈ ಹಿಡಿದು ನಡೆಸೆನ್ನನು
ಹೇಳಿ ನನ್ನಡಿಯಿಡಿಸು ಬಲುದೂರ ನೋಟವನು
ಕೇಳನೊಡನೆಯೆ ಸಾಕು ನನಗೊಂದು ಹೆಜ್ಜೆ
ಮುನ್ನ ಇಂತಿರದಾದೆ ನಿನ್ನ ಬೇಡದೆ ಹೋದೆ
ಕೈ ಹಿಡಿದು ನಡೆಸೆನ್ನನು
ಇಷ್ಟುದಿನ ಸಲಹಿರುವೆ ಈ ಮೂರ್ಖನನು ನೀನು ಮುಂದೆಯೂ
ಕೈ ಹಿಡಿದು ನಡೆಸದಿಹೆಯಾ
ಕಷ್ಟದಡವಿಯ ಕಳೆದು ಬೆಟ್ಟ ಹೊಳೆಗಳ ಹಾದು
ಇರುಳನ್ನು ನೂಕದಿಹೆಯಾ? ಬೆಳಗಾಗ ಹೊಳೆಯದೆಯೆ ಹಿಂದೊಮ್ಮೆ ನಾನೊಲಿದು
ಈ ನಡುವೆ ಕಳಕೊಂಡೆ ದಿವ್ಯ ಮುಖ ನಗುತ – ಬಿ.ಎಂ.ಶ್ರೀಕಂಠಯ್ಯ
Instagram filter used: Moon
[…] many English poems to Kannada. I remember this from our school days and, for some reason, stayed with me. What an excellent translation this is. Better than the English version, in my opinion. The first […]